Court case :ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ 

Congress MLA Vinay Kulkarni and 15 others sentenced to life imprisonment in the Yogesh Gowda murder case by a special court in Dharwad. 17 accused found guilty after long trial.
Congress leader Vinay Kulkarni sentenced to life imprisonment in Yogesh Gowda murder case verdict by Dharwad court Congress leader Vinay Kulkarni sentenced to life imprisonment in Yogesh Gowda murder case verdict by Dharwad court
Court case

Court case :ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ .

ಧಾರವಾಡ :-ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸುದೀರ್ಘ ವರ್ಷಗಳ ಕಾಲ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ, ಒಟ್ಟು ಆರೋಪಿಗಳ ಪೈಕಿ 17 ಮಂದಿಯನ್ನು ದೋಷಿಗಳೆಂದು ಘೋಷಿಸಿದ ಬೆನ್ನಲ್ಲೇ ವಿನಯ್ ಕುಲಕರ್ಣಿ ಸೇರಿದಂತೆ 16ಜನರಿಗೆ ಜೀವಾವಧಿ ಶಿಕ್ಷೆ ನೀಡಿ ಜನಪ್ರತಿನಿಧಿಗಳ ಕೋರ್ಟ ಆದೇಶ ಮಾಡಿದೆ.

Karnataka| ಜನರ ದುಡ್ಡಲ್ಲಿ ಅಧಿಕಾರಿಗಳ ವಿದೇಶಿ ಪ್ರವಾಸ 20 ಕೋಟಿಗೂ ಅಧಿಕ ವೆಚ್ಚ!

Advertisement

ನಿನ್ನೆ ದಿನ ಇಬ್ಬರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಲಾಗಿದ್ದು, ಇನ್ನಿಬ್ಬರನ್ನು ಮಾಫಿ ಸಾಕ್ಷಿಗಳೆಂದು ಪರಿಗಣಿಸಲಾಗಿತ್ತು.

ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 19 ಮಂದಿ ವಿರುದ್ಧ ಆರೋಪಗಳು ಕೇಳಿಬಂದಿದ್ದರೂ, ಅಂತಿಮವಾಗಿ 17 ಮಂದಿಗೆ ಮಾತ್ರ ದೋಷಾರೋಪಣೆ ಸಾಬೀತಾಗಿತ್ತು. ದೋಷಿಗಳಾದ ಆರೋಪಿಗಳನ್ನು ತಕ್ಷಣ ವಶಕ್ಕೆ ಪಡೆಯುವಂತೆ ನ್ಯಾಯಾಲಯವು ಕೇಂದ್ರ ತನಿಖಾ ದಳ (CBI )ಗೆ ನಿರ್ದೇಶನ ನೀಡಿತ್ತು.

ಸುಳ್ಳು ಸಾಕ್ಷಿ ನೀಡಿದವರ ವಿರುದ್ಧ ಕ್ರಮ.

ಪ್ರಕರಣದ ವಿಚಾರಣೆಯ ವೇಳೆ ಸುಳ್ಳು ಸಾಕ್ಷಿ ನೀಡಿದವರ ವಿರುದ್ಧವೂ ಕೋರ್ಟ್ ಕಠಿಣ ನಿಲುವು ತಳೆದಿದೆ. ಪೊಲೀಸ್ ಅಧಿಕಾರಿ ಶಿವಾನಂದ ಚಲವಾದಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚನೆ ನೀಡಿದೆ. ಸುಳ್ಳು ಸಾಕ್ಷಿ ನೀಡಿದ ಆರೋಪದಡಿ ಶಿವಾನಂದ ಚಲವಾದಿ, ಬಾಬು ಕಟಗಿ, ಶಂಕರ್ಗೌಡ ಬಸವನಗೌಡ ಪಾಟೀಲ್, ಡಾ. ದತ್ತಾತ್ರೇಯ ಗುಡಗಂಟಿ, ಆನಂದ ಈರಪ್ಪ ಉದ್ದನ್ನವರ್, ವಿನಾಯಕ್ ಬಿಂಜಿಯವರ್, ಮೋಹನ್ ಈಚಾರಪ್ಪ, ವಿವೇಕಾನಂದ ದಳವಾಯಿ, ನಟರಾಜ್ ಸರ್ಜ್ ದೇಸಾಯಿ ಹಾಗೂ ವಿಜಯ್ ಕುಲಕರ್ಣಿ ವಿರುದ್ಧ ಕಾನೂನು ಕ್ರಮ ಜರುಗಲಿದೆ. ಈ ಸಂಬಂಧ ಕೋರ್ಟ್ ತೀರ್ಪಿನ ಪ್ರತಿಯನ್ನು ಪಡೆದು ಸಿಟಿ ಸಿವಿಲ್ ಕೋರ್ಟ್ ರಿಜಿಸ್ಟ್ರಾರ್ ಅವರು ಅಧಿಕೃತವಾಗಿ ದೂರು ದಾಖಲಿಸಲಿದ್ದಾರೆ. ಇದರಿಂದ ಸುಳ್ಳು ಸಾಕ್ಷಿ ನೀಡಿದವರಿಗೂ ಕಾನೂನು ಪ್ರಕಾರ ಶಿಕ್ಷೆ ಆಗಲಿದೆ.

ಈ ಪ್ರಕರಣದಲ್ಲಿ ಸಿಬಿಐ(CBI) ಪರವಾಗಿ ಪ್ರಾಸಿಕ್ಯೂಟರ್ ಕೆ.ಎಸ್. ಹೇಮಾ ಹಾಗೂ ಶಿವಾನಂದ ಪೆರ್ಲಾ ಅವರು ವಾದ ಮಂಡಿಸಿದ್ದರು. ಪ್ರಕರಣದ ವಿವಿಧ ಅಂಶಗಳನ್ನು ನ್ಯಾಯಾಲಯದ ಮುಂದೆ ವಿವರವಾಗಿ ಮಂಡಿಸಲಾಗಿತ್ತು.

ಶಾಸಕ ಸ್ಥಾನ ಅನರ್ಹ.

ಇನ್ನು 15 ನೇ ಆರೋಪಿಯಾಗಿರುವ ವಿನಯ್ ಕುಲಕರ್ಣಿ ರವರು ಕಾಂಗ್ರೆಸ್ ಶಾಸಕರಾಗಿದ್ದು ಇದೀಗ ಜೀವಾವಧಿ ಶಿಕ್ಷೆ ಪ್ರಕಟಗೊಂಡ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನ ಕೂಡ ಅನರ್ಹವಾಗಲಿದೆ. ಇನ್ನು ವಿನಯ್ ಕುಲಕರ್ಣಿಗೆ ಮೇಲ್ಮನವಿ ಸಲ್ಲಿಸಲು ಸಹ ಅವಕಾಶಗಳಿವೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement