BREAKING NEWS
Search

ರಾಜ್ಯದಲ್ಲಿ ಮತ್ತೆ ಮಳೆ ಮುಂದುವರಿಕೆ:ಎಲ್ಲಿ ಏನು ವಿವರ ನೋಡಿ.

97

ಬೆಂಗಳೂರು :- ರಾಜ್ಯದಲ್ಲಿ ಮುಂದಿನ 2 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಹುತೇಕ ಹಲವು ಭಾಗದಲ್ಲಿ ಬಿಸಿಲು ,ಮಳೆ ಇರಲಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಸೂಚನೆ ಇದೆ. ಅಲ್ಲದೇ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಶಿವಮೊಗ್ಗ,ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ, ಕೊಪ್ಪಳ ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ 22 ಡಿಗ್ರಿ, ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!