ಪಶ್ಚಿಮ ಪದವೀಧರರ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ: ಬಿಜೆಪಿಯ ಸಂಕನೂರಗೆ 2,206 ಮತಗಳ ಮುನ್ನಡೆ
ಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದು, ಮೊದಲ ಸುತ್ತಿನ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮುನ್ನಡೆ ಸಾಧಿಸಿದ್ದಾರೆ.
ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು 6,483 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು 4,277 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಸಂಕನೂರ ಅವರು 2,206 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.Karnataka weather forecast: ಉತ್ತರ ಕನ್ನಡ,ಶಿವಮೊಗ್ಗ ಸೇರಿದಂತೆ ಹಲವು ಕಡೆ ಸಾಧಾರಣ ಮಳೆ ಎಚ್ಚರಿಕೆ
ಮೊದಲ ಸುತ್ತಿನಲ್ಲಿ ಸುಮಾರು 14 ಸಾವಿರ ಮತಗಳ ಎಣಿಕೆ ಪೂರ್ಣಗೊಂಡಿದೆ ಎಂದು ತಿಳಿದುಬಂದಿದೆ.
ಅಕ್ಟೋಬರ್ 23ರಂದು ನಡೆದಿತ್ತು ಮತದಾನ
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಅಕ್ಟೋಬರ್ 23ರಂದು ನಡೆದಿತ್ತು. ಕ್ಷೇತ್ರದಲ್ಲಿ ಒಟ್ಟು 97,400 ಮತದಾರರಿದ್ದು, ಅವರಲ್ಲಿ 73,692 ಮಂದಿ ಮತ ಚಲಾಯಿಸಿದ್ದರು. ಈ ಮೂಲಕ ಶೇ.75.66ರಷ್ಟು ಮತದಾನ ದಾಖಲಾಗಿತ್ತು.
14 ಟೇಬಲ್‌ಗಳಲ್ಲಿ ಮತ ಎಣಿಕೆ
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಒಟ್ಟು 14 ಟೇಬಲ್‌ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮತ ಎಣಿಕೆ ಕೇಂದ್ರದ ಭದ್ರತೆಗಾಗಿ ಮೂರು ಹಂತಗಳಲ್ಲಿ 212 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಈ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮೋಹನ ಲಿಂಬಿಕಾಯಿ, ಬಿಜೆಪಿಯಿಂದ ಎಸ್.ವಿ. ಸಂಕನೂರ ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮೊದಲ ಸುತ್ತಿನ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದು, ಮುಂದಿನ ಸುತ್ತುಗಳ ಮತ ಎಣಿಕೆಯ ಬಳಿಕ ಅಂತಿಮ ಫಲಿತಾಂಶ ಸ್ಪಷ್ಟವಾಗಲಿದೆ.
