BREAKING NEWS
Search

ಎರಡುತಾಸಿಗೂ ಹೆಚ್ಚುಕಾಲ ಬಾವಿಯಲ್ಲಿ ಒದ್ದಾಡಿದ ಮಹಿಳೆ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ.

1235

ಕಾರವಾರ :- ಬಾವಿಗೆ ಬಿದ್ದ ಮಾನಸಿಕ ಕಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ನಗರದ ಉದ್ಯಮನಗರ ಎಂಬಲ್ಲಿ ನಡೆದಿದೆ.

ಸುನಂದ ಪಟಗಾರ್(34) ಎಂಬ ಮಹಿಳೆಯೇ ರಕ್ಷಣೆಗೊಳಗಾದವಳಾಗಿದ್ದಾಳೆ.

ಇಂದು ಬೆಳಗ್ಗೆ ಮನೆಯಿಂದ ಹೊರಬಂದ ಮಹಿಳೆ ಏಕಾ ಏಕಿ ಸಾರ್ವಜನಿಕ ಬಾವಿಗೆ ಹಾರಿದ್ದಾಳೆ. ಈ ಸಂದರ್ಭದಲ್ಲಿ ಅದೃಷ್ಟವಶಾತ್ ಬಾವಿಯಲ್ಲಿ ಆಳವಿಲ್ಲದೇ ಇದ್ದಿದ್ದರಿಂದ ಆಕೆ ಬದುಕುಳಿದಿದ್ದು ಸುಮಾರು ಎರಡು ತಾಸಿಗೂ ಹೆಚ್ವು ಕಾಲ ಬಾವಿಯಲ್ಲೇ ಚೀರಾಡಿದ್ದಾಳೆ. ಈ ವೇಳೆ ಮನೆಯಲ್ಲಿ ಈಕೆ ಇರದುದ್ದನ್ನು ಗಮನಿಸಿ ಹೊರಬಂದು ನೋಡಿದಾಗ ,ಈಕೆ ಚೀರಾಡುವ ದ್ವನಿ ಮನೆಯ ಜನರಿಗೆ ಕೇಳಿಸಿದೆ. ತಕ್ಷಣ ಬಾವಿ ಇಣುಕಿ ನೋಡಿದಾಗ ಈಕೆ ಬಾವಿಯಲ್ಲಿ ಬಿದ್ದಿರುವು ಗಮನಕ್ಕೆ ಬಂದಿದೆ.

ತಕ್ಷಣ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು , ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ತಕ್ಷಣದಲ್ಲಿ ಕಾರ್ಯಾಚರಣೆ ನಡೆಸಿ ಬಾವಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ನೀರಿನಿಂದ ಹೊರಕ್ಕೆ ಕರೆತಂದಿದ್ದಾರೆ.

ಕಾರ್ಯಾಚರಣೆಯಲ್ಲಿ ಯಲ್ಲಾಪುರ ಅಗ್ನಿಶಾಮಕ ಠಾಣೆಯ ಪ್ರಭಾರ ಠಾಣಾಧಿಕಾರಿ .ಭೀಮರಾವ್ ವಾಯು ಉಪ್ಪಾರ್, ಸಿಬ್ಬಂದಿಗಳಾದ ಹನುಮಂತನಾಯ್ಕ ,ಉಲ್ಲಾಸ್ ವೈ ನಾಗೇಕರ್, ನಾಗೇಶ್ ದೇವಾಡಿಗ,ಪ್ರಶಾಂತ್ ಬಾರ್ಕಿ ,ಲಗುಮಣ್ಣ ಎಂಬುವವರು ಭಾಗವಹಿಸಿ ರಕ್ಷಣೆ ಮಾಡಿದ್ದಾರೆ.

ಘಟನೆ ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!