ಯಲ್ಲಾಪುರ:ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಚಾಲಕ ಸಾವು.

1387

ಕಾರವಾರ:- ಯಲ್ಲಾಪುರ ತಾಲೂಕಿನ ಹಿಟ್ಟಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಇಂದು ನಡೆದಿದೆ.

ಮೃತ ಲಾರಿಚಾಲಕ ಮಹಾರಾಷ್ಟ್ರ ಮೂಲದ ಪರಮೇಶ್ವರ ಲಕ್ಷ್ಮಣ ದಖಲವಾಡ (25) ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ಜಸ್ಪಾಲ್ ಕೆಸಾರ್ ಸಿಂಗ್, ದಿಲೀಪ್ ಮಾರುತಿ ಯವನೆ ಹಾಗೂ ಮಹಾರಾಷ್ಟ್ರದ ರಾಜು ಬಾಬುರಾವ್ ಎಳ್ಳೆ ಗಾಯಗೊಂಡಿದ್ದು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿಯ ಚಾಲಕ ರಾಜು ಎಳ್ಳೆ ಹೆದ್ದಾರಿಯಲ್ಲಿನ ಹೊಂಡ ತಪ್ಪಿಸಲು ಹೋದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಎರಡೂ ಲಾರಿಗಳು ರಸ್ತೆಯ ಪಕ್ಕಕ್ಕೆ ಸರಿದುಹೋಗಿ ಜಖಂಗೊಂಡಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!