ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಬಿದ್ದಿದೆ- ಸಚಿವ ಶ್ರೀರಾಮುಲು

465

ಕಾರವಾರ :- ನಮ್ಮ ತಟ್ಟೆಯಲ್ಲಿ ಹೆಗ್ಗಣ ಸತ್ತು ಬಿದ್ದಿದ್ದಾಗಿ ಕಾಂಗ್ರೆಸ್ ಟೀಕೆ ಮಾಡುತ್ತಿದೆ,ಆದ್ರೆ ಅವರ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿರುವುದನ್ನ ಅವರು ಮೊದಲು ನೋಡಿಕೊಳ್ಳಲಿ ಎಂದು ಸಚಿವ ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು ಯಲ್ಲಾಪುರದಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು
ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ವಿರೋಧಿ ಅಲೆಯಿಂದ ಸೋಲು ಸಂಭವಿಸಿದೆ ಎನ್ನುವ ಸಿದ್ಧರಾಮಯ್ಯ ಹೇಳಿದ್ದಾರೆ,ಈ ಅಲೆ, ಸುನಾಮಿ ಇದೆಲ್ಲ ಬಿಜೆಪಿಗಲ್ಲ, ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಎದುರಿಸಬೇಕಾಗಿದೆ
ಹಿಂದುಳಿದ, ಅಲ್ಪಸಂಖ್ಯಾತರ ಮುಖಂಡರುಗಳು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಟೀಕೆ ಮಾಡಿದ್ದಾರೆ.

60 ವರ್ಷ ಅವರದೇ ನೆರವಿನಿಂದ ಆಡಳಿತ ನಡೆಸಿದ ಕಾಂಗ್ರೆಸ್ ಇವತ್ತು ಹಿಂದುಳಿದವರ ವಿರುದ್ಧ ಮಾತನಾಡುತ್ತಿದ್ದಾರೆ.ಮಾನ ಮರ್ಯಾದೆ ಇದ್ರೆ ಹಿಂದುಳಿದವರ ಬಗ್ಗೆ ಮಾತನಾಡಬೇಡಿ,ಹಿಂದುಳಿದ ವರ್ಗಗಳು ಅಭಿವೃದ್ಧಿಯಾಗದಿರಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ವಾಗ್ದಾಳಿ ನಡೆಸಿದರು.

ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳ್ಳಿಗಳಲ್ಲಿ ವಿದ್ಯಾರ್ಥಿಗಳಿಗೆ ತೆರಳಲು ಸೂಕ್ತ ಬಸ್ ವ್ಯವಸ್ಥೆ ಇಲ್ಲ. ಈ ಕುರಿತು ತಕ್ಷಣ ಕ್ರಮ ಕೈಗೊಂಡು ಬದಲಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ತಿಳಿಸಿದರು. ಇದಲ್ಲದೆ ಕರೋನಾ ಕಾರಣದಿಂದ ಹಲವು ಭಾಗದಲ್ಲಿ ಬಸ್ ವ್ಯವಸ್ಥೆ ನಿಲ್ಲಿಸಲಾಗುತ್ತು. ಚಾಲಕ,ನಿರ್ವಾಹಕರಿಗೆ ಓ.ಟಿ ಸಹ ನೀಡುವ ಕುರಿತು ಸನಸ್ಯೆ ಇದೆ. ಶೀಘ್ರದಲ್ಲಿ ಬಗೆಹರಿಸಲಾಗುವುದು ಎಂದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!