Yellapur | 58.80 ಕೆಜಿ ಶ್ರೀಗಂಧ ಸಾಗಾಟ: ನಾಲ್ವರು ಬಂಧನ, ಓರ್ವ ಪರಾರಿ

Forest department officials seize 58.80 kg of sandalwood and arrest four accused in Yellapur, Uttara Kannada Forest department officials seize 58.80 kg of sandalwood and arrest four accused in Yellapur, Uttara Kannada
Forest department officials seize 58.80 kg of sandalwood and arrest four accused in Yellapur, Uttara Kannada

ಯಲ್ಲಾಪುರ(yellapur) ಪಟ್ಟಣದ ಬಿಸಗೋಡ ರಸ್ತೆ ಮಾರ್ಗದ ಸ್ಮಶಾನದ ಪಕ್ಕದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಬಂಧಿತರನ್ನು ಮಾಗೋಡಿನ ನಾಗೇಂದ್ರ ಮಂಜುನಾಥ ಸಿದ್ಧಿ, ಅಂಕೋಲಾ ತಾಲೂಕಿನ ಕಮ್ಮಾಣಿಯ ರವಿ ಕೃಷ್ಣ ಸಿದ್ಧಿ, ಕಾಳಮ್ಮನಗರದ ಮಂಜುನಾಥ ಪ್ರಭಾಕರ ಸಿದ್ಧಿ ಹಾಗೂ ಲಕ್ಷ್ಮಣ ಪ್ರಭಾಕರ ಸಿದ್ಧಿ ಎಂದು ಗುರುತಿಸಲಾಗಿದೆ. ವಜ್ರಳ್ಳಿಯ ಸತೀಶ ಸಿದ್ಧಿ ಎಂಬ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

58.80 ಕೆಜಿ ಶ್ರೀಗಂಧ ಜಪ್ತಿ

ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಗಳಿಂದ ಒಟ್ಟು 58.80 ಕೆಜಿ ಶ್ರೀಗಂಧ ವಶಪಡಿಸಿಕೊಂಡಿದ್ದಾರೆ.

ಜಪ್ತಿಯಾದ ಶ್ರೀಗಂಧದಲ್ಲಿ:

Advertisement

  • 3.80 ಕೆಜಿ ತೂಕದ ಸಿಪ್ಪೆ ಕೆತ್ತಿದ 12 ಶ್ರೀಗಂಧದ ತುಂಡುಗಳು
  • 55 ಕೆಜಿ ತೂಕದ ಸಿಪ್ಪೆ ಸಹಿತ 17 ಶ್ರೀಗಂಧದ ತುಂಡುಗಳು

ಇದರ ಜೊತೆಗೆ ಕೃತ್ಯಕ್ಕೆ ಬಳಸಿದ್ದ KA-31 KE-4658 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನವನ್ನು ಕೂಡ ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿಗಳು ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಶ್ರೀಗಂಧದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ಪ್ರವೃತ್ತಿ ಹೊಂದಿದ್ದರು ಎಂದು ಅರಣ್ಯ ಇಲಾಖೆ ತಿಳಿಸಿದೆ.

ನ್ಯಾಯಾಂಗ ಬಂಧನ

ಆರೋಪಿಗಳ ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್‌ 84, 86, 87, 71(ಎ) ಹಾಗೂ ಕರ್ನಾಟಕ ಅರಣ್ಯ ನಿಯಮ 1969ರ ನಿಯಮ 144 ಮತ್ತು 155ರ ಅಡಿಯಲ್ಲಿ ಅರಣ್ಯ ಮೊಕದ್ದಮೆ ದಾಖಲಿಸಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ

ಯಲ್ಲಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಎ. ಶೇಖ್ ಅವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಮಂಜುನಾಥ ಹೆಚ್. ನಾಯ್ಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಇದನ್ನೂ ಓದಿ:-Yallapur | ಮೀನು ಮಾರಾಟಕ್ಕೆ ಆಕ್ಷೇಪ -ಚೀಫ್ ಆಫೀಸರ್ ರಿಂದ ಮಹಿಳೆಯರ ಮೇಲೆ ಹಲ್ಲೆ 

ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳು, ಅರಣ್ಯ ಪಾಲಕರು ಹಾಗೂ ಸಿಬ್ಬಂದಿ ಸೇರಿದಂತೆ ಅರಣ್ಯ ಇಲಾಖೆಯ ಹಲವು ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement